ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ರಸ್ತೆ ಮುಖಾಂತರ ಹೋಗುವ ಸಂದರ್ಭದಲ್ಲಿ ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸರು ಕರ್ತವ್ಯಕ್ಕೆ ತಡವಾಗಿ ಬಂದಿದ್ದಕ್ಕೆ ಆ ಇಬ್ಬರೂ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಧಾರವಾಡ ಮಹಿಳಾ ಪೊಲೀಸ್ ಠಾಣೆಯ ಹವಾಲ್ದಾರ ಸುರೇಶ ಹುಡೇದ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆಯ ರಾಜೀವ್ ಶಿರುಂದ ಎಂಬುವವರೇ ಅಮಾನತ್ತುಗೊಂಡ ಪೊಲೀಸರು.
ತಮಗೆ ನಿಯೋಜಿಸಿದ್ದ ಕರ್ತವ್ಯಕ್ಕೆ ತಡವಾಗಿ ಬಂದು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರೂ ಪೊಲೀಸರನ್ನು ಅಮಾನತ್ತುಗೊಳಿಸಿದ್ದಾರೆ.
Kshetra Samachara
24/08/2022 12:19 pm