ಹುಬ್ಬಳ್ಳಿ: ಅವಳಿ ನಗರದಲ್ಲಿ ವರಕವಿ ಬೇಂದ್ರೆ ಹೆಸರನ್ನು ಇಟ್ಟುಕೊಂಡು ಸಾರಿಗೆ ಸಂಸ್ಥೆಯೊಂದು ಸಾರ್ವಜನಿಕರಿಗೆ ಕಂಟಕವಾದ ಕುರಿತು ನಿನ್ನೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದು, ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಬೇಂದ್ರೆ ಬಸ್ ಗಳಿಗೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಿದ್ದಾರೆ.
ನಗರದ ರೈಲ್ವೇ ಸ್ಟೇಷನ್ ರಸ್ತೆ ಸೇರಿದಂತೆ ಚಿಟಗುಪ್ಪಿ ಬಳಿಯಲ್ಲಿ ಬೇಂದ್ರೆ ಬಸ್ ಗಳು ನೋ ಪಾರ್ಕಿಂಗ್ ಹಾಗೂ ಸಿಗ್ನಲ್ ಜಂಪ್ ಮಾಡಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ, ನಮಗೆ ಸಂಚಾರಿ ನಿಯಮಗಳು ಅನ್ವಯಿಸುವುದಿಲ್ಲ ಎಂದು ರಾಜಾರೋಷವಾಗಿ ಓಡಾಡುತ್ತಿದ್ದವು.
ನಿನ್ನೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ನಲ್ಲಿ ವಿಸ್ತೃತವಾಗಿ ವರದಿ ಪ್ರಸಾರ ಆಗುತ್ತಿದ್ದ ಹಾಗೆ ಹುಬ್ಬಳ್ಳಿಯ ಪೂರ್ವ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ನಾಗಯ್ಯ ಕಾಡದೇವರ, ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಬೇಂದ್ರೆ ಬಸ್ ಗಳಿಗೆ ದಂಡ ಹಾಕುವುದರ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ನಗರದಲ್ಲಿ ಸಂಚಾರಿ ನಿಯಮಗಳನ್ನು ಬ್ರೇಕ್ ಮಾಡಿ ಓಡಾಡುತ್ತಿದ್ದ ಬೇಂದ್ರೆ ಬಸ್ ಗಳಿಗೆ ನಮ್ಮ ವರದಿಯನ್ನು ನೋಡಿ ಬ್ರೇಕ್ ಹಾಕಲು ಮುಂದಾದ ಸಂಚಾರಿ ಪೊಲೀಸರಿಗೆ ಕೂಡಾ ನಮ್ಮ ಕಡೆಯಿಂದ ಧನ್ಯವಾದಗಳು.
ವಿನಯ ರೆಡ್ಡಿ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
14/09/2022 03:59 pm