ಧಾರವಾಡ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವನ್ನು ವಜಾಗೊಳಿಸಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸೋಮವಾರ ಧಾರವಾಡ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಘಟನೆಯನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
Kshetra Samachara
05/10/2020 01:46 pm