ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲೂರು ಸೇತುವೆ.. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವೆ

ಧಾರವಾಡ: ಧಾರವಾಡ ಸಮೀಪದ ನವಲೂರು ಗ್ರಾಮದ ಬಳಿಯ ನಿರ್ಮಾಣ ಹಂತದ ಸೇತುವೆ ಪ್ಯಾನಲ್ ಗಳು ಕಿತ್ತು ಬೀಳುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ ಅವರು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರು ಪ್ರಸಾದ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

ಎರಡು ವರ್ಷಗಳಿಂದ ಈ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದು ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿಯಾಗಿದೆ. ಸೇತುವೆ ಪ್ಯಾನಲ್ ಗಳು ಕಿತ್ತು ಬೀಳುತ್ತಿದ್ದು, ನವಲೂರು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಅವರು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿರುವ ಗುರುಪ್ರಸಾದ್ ಅವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಶಾಸಕ ಬೆಲ್ಲದ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Edited By :
Kshetra Samachara

Kshetra Samachara

23/09/2020 08:46 pm

Cinque Terre

19.37 K

Cinque Terre

4

ಸಂಬಂಧಿತ ಸುದ್ದಿ