ಹುಬ್ಬಳ್ಳಿ: ಮಟನ್ ಮಾರುಕಟ್ಟೆಯಲ್ಲಿರುವ ಗೋಡೌನ್ ಒಳಗಡೆ ಹಾಕಲಾಗಿದ್ದ ನೂರಕ್ಕೂ ಹೆಚ್ಚು ಕುರಿಗಳು ಸತ್ತು ಹೋದ ಘಟನೆ ಹಳೇ ಹುಬ್ಬಳ್ಳಿಯ ಮೇಧಾರ ಓಣಿಯ ಕುಂಬಾರ ಸಾಲ ಹತ್ತಿರದ ಮಟನ್ ಮಾರುಕಟ್ಟೆಯಲ್ಲಿ ನಡೆದಿದೆ.
ಹೌದು... ನಿನ್ನೆಯಷ್ಟೇ ವರುಣನ ಅಬ್ಬರಕ್ಕೆ ಕುರಿಗಳನ್ನು ಮಾರುಕಟ್ಟೆಯ ಗೋಡೌನ್ ಒಳಗೆ ಹಾಕಲಾಗಿದ್ದು, ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹಾಗೂ ಕುರಿಗಳ ಮಾಲೀಕರು ದೌಡಾಯಿಸಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/10/2022 08:53 am