ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.21ರಿಂದ 28ರವರೆಗೆ ಹು-ಧಾ ಮಹಾನಗರದಲ್ಲಿ ನಿಷೇಧಾಜ್ಞೆ

ಹುಬ್ಬಳ್ಳಿ: ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯು ಸೆ.21ರಿಂದ 28 ರವರಗೆ ನಡೆಯಲಿದ್ದು, ಹು-ಧಾ ಮಹಾನಗರದಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವಿಸ್ತೀರ್ಣದ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಣೆ ಮಾಡಿ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುವುದು. ಅಲ್ಲದೇ ಪರೀಕ್ಷಾ ಕೇಂದ್ರದ ಹತ್ತಿರದ ಝರಾಕ್ಸ್ ಸೆಂಟರ್ ಕಡ್ಡಾಯವಾಗಿ ಬಂದ್ ಮಾಡುವಂತೆ ಆದೇಶಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

19/09/2020 04:54 pm

Cinque Terre

58.41 K

Cinque Terre

11

ಸಂಬಂಧಿತ ಸುದ್ದಿ