ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದಲಿತರ ಮೇಲಿನ ಹಲ್ಲೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ರಾಜಸ್ಥಾನದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ದಲಿತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಲೇ ಇದೆ, ಹಲ್ಲೆ ಹಾಗೂ ಕೊಲೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗುತ್ತಿದ್ದು ಕಠಿಣ ಕಾನೂನು ಕ್ರಮ ರೂಪಿಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ರಾಜಸ್ಥಾನದಲ್ಲಿ ನಡೆದ ಕೊಲೆ ಪ್ರಕರಣ ಬಹಳಷ್ಟು ಖಂಡನೀಯ ಕೂಡಲೇ ಸರ್ಕಾರ ತಪ್ಪಿತಸ್ಥರನ್ನು ಗಲ್ಲಿಗೇರಿಸುವ ಕೆಲಸ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By :
Kshetra Samachara

Kshetra Samachara

17/08/2022 08:03 pm

Cinque Terre

35.55 K

Cinque Terre

1

ಸಂಬಂಧಿತ ಸುದ್ದಿ