ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಕಾಮಣ್ಣನ ಪ್ರತಿಷ್ಠಾಪನೆ ನಿಮಿತ್ತ ಸ್ಥಳಕ್ಕೆ ಅಧಿಕಾರಿಗಳು ಭೇಟಿ

ನವಲಗುಂದ: ಶ್ರೀ ರಾಮಲಿಂಗ ಕಾಮಣ್ಣನ ಪ್ರತಿಷ್ಠಾಪನೆ ನಿಮಿತ್ತ ದೇವಸ್ಥಾನದ ಮುಂಭಾಗದಲ್ಲಿ ನವಲಗುಂದ ತಾಲೂಕ ದಂಡಾಧಿಕಾರಿಗಳು ಹಾಗೂ ಆರಕ್ಷಕ ಸಿಬ್ಬಂದಿ ಹಾಜರಿದ್ದು, ಬಂದೋಬಸ್ತ್ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಯಿತು.

ಇನ್ನು ಕಾಮಣ್ಣನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ನವಲಗುಂದ ತಾಲೂಕ ದಂಡಾಧಿಕಾರಿ ನವೀನ ಹುಲ್ಲೂರು, ನವಲಗುಂದ ಪುರಸಭೆ ಅಧ್ಯಕ್ಷರಾದ ಮಂಜುನಾಥ ಜಾದವ, ತಾಲೂಕ ಪೊಲೀಸ್ ಅಧಿಕಾರಿಗಳಾದ ಸಿಪಿಐ ಚಂದ್ರಶೇಖರ್ ಮಠಪತಿ, ಪಿಎಸ್ಐ ಕಲ್ಮೇಶ ಬೆನ್ನೂರ ಸೇರಿದಂತೆ ದೇವಸ್ಥಾನದ ಕಮಿಟಿಯ ಎಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/03/2022 10:36 pm

Cinque Terre

13.97 K

Cinque Terre

0

ಸಂಬಂಧಿತ ಸುದ್ದಿ