ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದು ಮತ್ತೆ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಉಪನಗರ ಠಾಣೆಯಲ್ಲಿ ಸಿಬಿಐ ಅಧಿಕಾರಿಗಳು ಕಂಡಿರಲಿಲ್ಲ. ಇಂದು ಮತ್ತೆ ಹಾಜರಾದ ಅಧಿಕಾರಿಗಳು, ಪೊಲೀಸ್ ಪೇದೆ ಶಂಕರಗೌಡ ಪಾಟೀಲನನ್ನು ವಿಚಾರಣೆಗೊಳಪಡಿಸಿರುವುದಾಗಿ ತಿಳಿದು ಬಂದಿದೆ.
Kshetra Samachara
23/09/2020 10:20 pm