ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರು ಇಂದು ಧಾರವಾಡದ ಉಪನಗರ ಠಾಣೆಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.
ಸಿಬಿಐ ಅಧಿಕಾರಿಗಳು ದಿನೇ ದಿನೇ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುತ್ತಿದ್ದಾರೆ. ಈ ಹಿಂದೆ ವಿಜಯ ಕುಲಕರ್ಣಿ ಅವರನ್ನು ಬೆಂಗಳೂರಿನಲ್ಲಿ ಕರೆಯಿಸಿ ವಿಚಾರಣೆ ನಡೆಸಿದ್ದ ಸಿಬಿಯ ಅಧಿಕಾರಿಗಳು ಇಂದು ಧಾರವಾಡದ ಉಪನಗರ ಠಾಣೆಗೆ ಕರೆಯಿಸಿ ವಿಚಾರಣೆಗೊಳಪಡಿಸಿದ್ದಾರೆ.
ಇವರ ಜೊತೆಗೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಬಸವರಾಜ ಮುತ್ತಗಿ ಹಾಗೂ ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಶಿವಯೋಗಿ ಹಿರೇಮಠ, ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರನ್ನು ಸಿಬಿಐ ಅಧಿಕಾರಿಗಳು ಇಂದು ವಿಚಾರಣೆಗೊಳಪಡಿಸಿದರು.
Kshetra Samachara
26/09/2020 08:21 pm