ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾಕ್ಷ್ಯ ನಾಶ- ವಿಚಾರಣೆ ಮುಂದೂಡಿದ ನ್ಯಾಯಾಲಯ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಸಿಬಿಐ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಈಗಾಗಲೇ ಯೋಗೀಶಗೌಡ ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಕುಲಕರ್ಣಿ ಸೇರಿ 8 ಜನರಿಗೆ‌ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. 8 ಜನರು ಇಂದಿನ ವಿಚಾರಣೆಗೆ ಗೈರಾದ ಹಿನ್ನೆಲೆ, ಪುನಃ ಹಾಜರಾಗಲು‌ ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದೆ.‌ ಫೆ. 10ರಂದು ಹಾಜರಾಗಲು ಸೂಚಿಸಿ, ವಿಚಾರಣೆ ಮುಂದೂಡಿಕೆ ಮಾಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಪ್ರಧಾನ ದಿವಾನಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಸಿಬಿಐ ಅರ್ಜಿ ಪರಿಗಣಿಸಿ ನ್ಯಾಯಾಲಯ ದೂರು ದಾಖಲಿಸಿಕೊಂಡಿತ್ತು. ತನಿಖೆ ನಂತರ ಸಿಬಿಐ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಈ ಹಿಂದೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

Edited By : Vijay Kumar
Kshetra Samachara

Kshetra Samachara

02/01/2021 07:53 pm

Cinque Terre

41.22 K

Cinque Terre

2

ಸಂಬಂಧಿತ ಸುದ್ದಿ