ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಲೇಔಟ್ ಗಳನ್ನು ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು.
ಮಂಟೂರು ರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಸೈಟುಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ಬೆಳ್ಳಂಬೆಳಿಗ್ಗೆ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ನಾಗೇಶ ಕಲಬುರ್ಗಿ ಹಾಗೂ ಪ್ರಾಧಿಕಾರದ ಅಧಿಕಾರಗಳ ನೇತೃತ್ವದಲ್ಲಿ ಸೈಟುಗಳ ತೆರುವು ಕಾರ್ಯಾಚರಣೆ ನಡೆಸಿದ್ದು,ಅನಧಿಕೃತ ಲೇಔಟ್ ಗಳಿಗೆ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ಬಿಸಿ ಮುಟ್ಟಿಸಿದೆ.
ಈ ಹಿಂದೆಯಷ್ಟೇ ಸಭೆಯಲ್ಲಿ ಕಾರ್ಯಾಚರಣೆ ನಡೆಸುವುದಾಗಿ ಹೇಳಿದ್ದ ನಾಗೇಶ ಕಲಬುರಗಿ ಅವರು ಇಂದು ಬೆಳಿಗ್ಗೆ ಅನಧಿಕೃತ ಲೇಔಟ್ ಗಳಿಗೆ ಹಾಗೂ ಲೇಔಟ್ ಮಾಲಿಕರಿಗೆ ಬಿಸಿ ಮುಟ್ಟಿಸಿದ್ದಾರೆ.
Kshetra Samachara
18/01/2021 04:11 pm