ಧಾರವಾಡ: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಧಾರವಾಡದ ಎರಡನೇ ಹೆಚ್ಚುವರಿ ನ್ಯಾಯಾಲಯವು ಕಲಂ 8 ರ ಅಡಿಯಲ್ಲಿ 3 ವರ್ಷ ಸಾದಾ ಶಿಕ್ಷೆ, 1 ಸಾವಿರ ರೂಪಾಯಿ ದಂಡ ಹಾಗೂ ಕಲಂ 10 ರ ಅಡಿಯಲ್ಲಿ 5 ವರ್ಷ ಶಿಕ್ಷೆ ಮತ್ತು 3 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಧಾರವಾಡದ ಶೀಲವಂತರ ಓಣಿಯ ಮಾಬೂಲಿ ಶೇಖ್ ಎಂಬಾತ ಅದೇ ಓಣಿಯ 7 ವರ್ಷದ ಬಾಲಕಿ ಮೇಲೆ 27-3-2019 ರಂದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಆತನ ಮೇಲಿನ ಆರೋಪ ನಿರ್ಧಾರವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದೆ.
Kshetra Samachara
18/01/2021 10:02 pm