ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ಆರೋಪದಡಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಈಗಾಗಲೇ ಕೆಲವು ಬಾರಿ ಹೈಕೋರ್ಟ್ ವಿನಯ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ಮುಂದೂಡಿತ್ತು. ಅದೇ ಪ್ರಕಾರ ಇಂದು ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ವಿನಯ್ ಅವರಿಗೆ ಇಂದು ಜಾಮೀನು ಸಿಗಬಹುದು ಎಂದು ಅವರ ಅಭಿಮಾನಿಗಳು ನಿರೀಕ್ಷೆ ಮಾಡುತ್ತಿದ್ದರು. ಆದರೆ, ಹೈಕೋರ್ಟ್ ಪೀಠ ನಾಳೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ನಾಳೆಯಾದರೂ ವಿನಯ್ ಅವರಿಗೆ ಜಾಮೀನು ಸಿಗಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.
Kshetra Samachara
20/01/2021 04:40 pm