ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಚಾರಣೆಗೆ ಹಾಜರಾದ ಮುತ್ತಗಿ, ಪ್ರಶಾಂತ

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಳ್ಳುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಇತ್ತ ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಮಧ್ಯೆ ಬಿಡುವು ಕೊಟ್ಟಿದ್ದ ಸಿಬಿಐ ಅಧಿಕಾರಿಗಳು ಇಂದು ಮತ್ತೆ ಧಾರವಾಡದ ಉಪನಗರ ಠಾಣೆಗೆ ಬಂದು ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕ ಪ್ರಶಾಂತ ಕೆಕರೆ ಹಾಗೂ ಎ 1 ಆರೋಪಿ ಬಸವರಾಜ ಮುತ್ತಗಿ ಅವರನ್ನು ಪೊಲೀಸ್ ಠಾಣೆಗೆ ಕರೆದು ವಿಚಾರಣೆಗೊಳಪಡಿಸಿದರು.

ಈ ಇಬ್ಬರನ್ನೂ ಅಧಿಕಾರಿಗಳು ಹಲವು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದರು. ವಿಚಾರಣೆ ಮುಗಿಸಿ ಬಂದ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿದೇ ಹೋದರು.

Edited By : Nagesh Gaonkar
Kshetra Samachara

Kshetra Samachara

21/01/2021 06:53 pm

Cinque Terre

37.97 K

Cinque Terre

2

ಸಂಬಂಧಿತ ಸುದ್ದಿ