ಧಾರವಾಡ: ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿನಾಯಕ ಮನಿಯಾರಕರ ಎಂಬಾತನಿಗೆ ಧಾರವಾಡದ 2ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕಳೆದ 2018ರ ಫೆ.13 ರ ರಾತ್ರಿ ಕೋಳಿಕೇರಿ ಪ್ರದೇಶದ ಕೆರೆಕಟ್ಟೆ ಹತ್ತಿರ ಈರಪ್ಪ ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಶಹರ ಠಾಣೆ ಪೊಲೀಸರು ವಿನಾಯಕನನ್ನು ಬಂಧಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಎಂ . ಪಂಚಾಕ್ಷರಿ ಅವರು ಸೋಮವಾರ ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಯ ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದ್ದರು.
Kshetra Samachara
02/02/2021 07:54 am