ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿ-ಧಾರವಾಡದಲ್ಲಿ 5 ಕಡೆ ಎಸಿಬಿ ಅಧಿಕಾರಿಗಳ ದಾಳಿ

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿ- ಧಾರವಾಡದ 5 ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಸಂಪಾದನೆ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ಟೀಂ ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವರಾಜ ಕಲ್ಮೇಶ ಶಿಗ್ಗಾವಿ ಇವರು ಹುಬ್ಬಳ್ಳಿಯಿಂದ ವರ್ಗಾವಣೆಯಾಗಿದ್ದು, ಇನ್ನೂ ಅವರಿಗೆ ಹುದ್ದೆಯನ್ನು ತೋರಿಸಿಲ್ಲ. ಅವರ ಮನೆಯ ಮೇಲೆ ಧಾರವಾಡದ ಎಸಿಬಿ ಅಧಿಕಾರಿಗಳ 3 ತಂಡವು ದಾಳಿ ಮಾಡಿದೆ.

ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿಯನ್ನು ಮಾಡಲಾಗಿದೆ. ಹುಬ್ಬಳ್ಳಿಯ ಒಂದು ಕಡೆ ಮತ್ತು ಧಾರವಾಡದ ಎರಡು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಲಾಗಿದೆ‌. ಇನ್ನೂ ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ಸೂರ್ಯ ಉದಯಿಸುವ ಮುನ್ನವೇ ಭ್ರಷ್ಟ ಅಧಿಕಾರಿಗಳ ಮನೆಯ ಬಾಗಿಲು ಬಡಿದು ಪರಿಶೀಲನೆ ಮಾಡುತ್ತಾ ಇದ್ದಾರೆ.

ಹಾವೇರಿಯ ಮತ್ತು ದಾವಣಗೆರೆ ಎಸಿಬಿ ಅಧಿಕಾರಿಗಳ ಎರಡು ತಂಡ ಎರಡು ಕಡೆಗಳಲ್ಲಿ ದಾವಣಗೆರೆಯಲ್ಲಿ ಅರಣ್ಯ ಇಲಾಖೆಯ ಎಸಿಎಫ್ ಶ್ರೀನಿವಾಸ್ ಅವರ ಮನೆಯ ಎರಡು ಕಡೆಗಳಲ್ಲಿ ಅಧಿಕಾರಿಗಳು ಶೋಧ ಮಾಡುತ್ತಿದ್ದಾರೆ. ಒಟ್ಟಾರೆ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದಲ್ಲಿ ಐದು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

Edited By : Vijay Kumar
Kshetra Samachara

Kshetra Samachara

02/02/2021 09:00 am

Cinque Terre

32.43 K

Cinque Terre

12

ಸಂಬಂಧಿತ ಸುದ್ದಿ