ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಸಾರ್ವಜನಿಕರು ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತಿ ವಹಿಸಲಿ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ

ಧಾರವಾಡ: ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸಮಾಡಿ, ವಂಚಿಸಿದ ಪ್ರಕರಣ ಬೇಧಿಸಿದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸ್‍ಪ್, ಮೇಸೆಂಜರ್, ಟ್ವೀಟರ್ ಮುಂತಾದವುಗಳ ಬಳಕೆಯಲ್ಲಿ ಜಾಗೃತಿ ವಹಿಸಬೇಕು. ಅನಗತ್ಯ ಚಾಟಿಂಗ್, ಮೇಸೆಜ್ ಮಾಡುವುದರಿಂದ ದೂರವಿರಬೇಕು. ವಿವಿಧ ರೀತಿಯ ಅಪರಾಧ ಕೃತ್ಯಗಳು, ಅಮಾಯಕರಿಗೆ ಮೋಸ, ವಂಚನೆ, ಬೆದರಿಕೆ ಮತ್ತು ಬ್ಲ್ಯಾಕ್‍ಮೇಲ್ ದಂತಹ ಕೃತ್ಯಗಳಿಂದ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳು ಸಂಭವಿಸುತ್ತಿವೆ.

ಸಾರ್ವಜನಿಕರು ತಮ್ಮ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಮಿತ ಹಾಗೂ ಜಾಗೃತಿ ವಹಿಸಿದರೆ ಮೋಸ, ವಂಚನೆಗಳಿಗೆ ಬಲಿಯಾಗದೇ ಇರಬಹುದು. ಒಂದು ವೇಳೆ ಅಂತಹ ಯಾವುದೇ ವಂಚನೆ, ಬ್ಲ್ಯಾಕ್‍ಮೇಲ್, ಬೆದರಿಕೆಗಳಿಗೆ ಒಳಗಾದರೆ ತಕ್ಷಣ ಹತ್ತಿರದ ಪೊಲೀಸ್‍ಠಾಣೆ ಅಥವಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖುದ್ದಾಗಿ ಭೇಟಿ ಮಾಡಿ ಅಥವಾ ಇ-ಮೇಲ್, ವಾಟ್ಸ್‍ಪ್ ಮೂಲಕ ಮತ್ತು ಜಿಲ್ಲಾ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ತಕ್ಷಣ ದೂರು ನೀಡಲು ಮುಂದಾಗಬೇಕು. ದೂರು ನೀಡುವವರು ಬಯಸಿದರೆ ಅವರ ಮಾಹಿತಿಯನ್ನು ಗೌಪ್ಯವಾಗಿಟ್ಟು ತನಿಖೆ ಕೈಗೊಂಡು ಅಪರಾಧಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸಿ ನ್ಯಾಯಾಲಯದಿಂದ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು.

ಆದ್ದರಿಂದ ಯಾವುದೇ ರೀತಿಯ ಬ್ಲ್ಯಾಕ್‍ಮೇಲ್, ಬೆದರಿಕೆಗಳಗೆ ಒಳಗಾಗುವವರು ಯಾವುದೇ ಹಿಂಜರಿಕೆ ಇಲ್ಲದೇ ಪೊಲೀಸ್ ಇಲಾಖೆಯ ಸಹಾಯ ಪಡೆದು ಇಂತಹ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಮತ್ತು ಪೊಲೀಸ್ ಇಲಾಖೆಯ ಜನಸ್ನೇಹಿ ಆಡಳಿತ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಹೇಳಿದರು.

Edited By : Manjunath H D
Kshetra Samachara

Kshetra Samachara

04/02/2021 08:33 pm

Cinque Terre

30.21 K

Cinque Terre

0

ಸಂಬಂಧಿತ ಸುದ್ದಿ