ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಎರಡು ಕೇಂದ್ರಗಳ ಸುತ್ತ ಫೆ.13 ರಿಂದ ನಿಷೇಧಾಜ್ಞೆ

ಧಾರವಾಡ: ಫೆ.13 ರಿಂದ 16 ರವರೆಗೆ ಕರ್ನಾಟಕ ಲೋಕ ಸೇವಾ ಆಯೋಗದವರು ಗೆಜೆಟೆಡ್ ಪ್ರೊಬೇಷನರ್ ಗ್ರೂಫ್-ಎ ಮತ್ತು ಗ್ರೂಫ್-ಬಿ ವೃಂದದ ಹುದ್ದೆಗಳಿಗಾಗಿ ಕ್ರಮವಾಗಿ ನಡೆಸಲಾಗುವ ಮುಖ್ಯ ಪರೀಕ್ಷೆಗಳಾದ ಕನ್ನಡ, ಇಂಗ್ಲಿಷ್, ಪ್ರಬಂಧ, ಸಾಮಾನ್ಯ ಅಧ್ಯಯನ-1, ಸಾಮಾನ್ಯ ಅಧ್ಯಯನ-2, ಸಾಮಾನ್ಯ ಅಧ್ಯಯನ-3 ಮತ್ತು ಸಾಮಾನ್ಯ ಅಧ್ಯಯನ-4 ಪರೀಕ್ಷೆಗಳನ್ನು ಧಾರವಾಡದ 02 ಪರೀಕ್ಷಾ ಕೇಂದ್ರಗಳಲ್ಲಿ ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ್ತು ಯಾವುದೇ ಅಹಿತಕರ ಚಟುವಟಿಕೆಗಳು, ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝರಾಕ್ಸ್ ಅಂಗಡಿಗಳು ಪರೀಕ್ಷೆಯ ಸಮಯದಲ್ಲಿ ಕಾರ್ಯ ನಿರ್ವಹಿಸದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಗಳು ಶಾಂತಿಯುತವಾಗಿ, ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅನುಕೂಲವಾಗುವ ದೃಷ್ಟಿಯಿಂದ ಸಿಆರ್ ಪಿಸಿ ಕಲಂ 144 ಹಾಗೂ 20ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಫೆ.13 ರಿಂದ 16 ರವರೆಗೆ ಧಾರವಾಡ ನಗರದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆ, ಕಾಲೇಜ್ ರೋಡ, ಧಾರವಾಡ. ಬಾಸೆಲ್ ಮಿಷನ್ ಗರ್ಲ್ಸ್ ಹೈಸ್ಕೂಲ್, ಸ್ಟೇಷನ್ ರೋಡ್, ಹೆಡ್ ಪೋಸ್ಟ್ ಆಫೀಸ್ ಹತ್ತಿರ, ಧಾರವಾಡ ಈ ಎರಡು ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ.

ಫೆ.13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ, ಫೆ.14 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಫೆ.15 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಗೂ ಫೆ. 16 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ, ಮದ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.

ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಜರುಗಿಸಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

10/02/2021 09:39 pm

Cinque Terre

13.38 K

Cinque Terre

0

ಸಂಬಂಧಿತ ಸುದ್ದಿ