ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾಕ್ಷ್ಯ ನಾಶ ಪ್ರಕರಣ- ಫೆ.15ಕ್ಕೆ ಮುಂದೂಡಿಕೆ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಬಿಐ ಸಲ್ಲಿಸಿರುವ ಸಾಕ್ಷ್ಯ ನಾಶ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆ.15ಕ್ಕೆ ಮತ್ತೆ ಮುಂದೂಡಿದೆ.

ಈಗಾಗಲೇ ವಿನಯ್ ಕುಲಕರ್ಣಿ ಅವರ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದ್ದು, ಈ ಪ್ರಕರಣವನ್ನೂ ಅದೇ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ವಿನಯ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಎರಡೂ ಪ್ರಕರಣಗಳ ವಿಚಾರಣೆಯನ್ನು ಫೆ.15 ಕ್ಕೆ ನ್ಯಾಯಾಲಯ ಮುಂದೂಡಿದೆ.

Edited By : Vijay Kumar
Kshetra Samachara

Kshetra Samachara

12/02/2021 06:53 pm

Cinque Terre

11.72 K

Cinque Terre

0

ಸಂಬಂಧಿತ ಸುದ್ದಿ