ಕುಂದಗೋಳ : ಯಾವುದೇ ಇಲಾಖೆ ಕಚೇರಿಯಲ್ಲಿ ಸರ್ಕಾರಿ ಕೆಲಸಗಳಿಗೆ ನಿಮಗೆ ಯಾರಾದರೂ ಲಂಚ ಕೇಳಿದ್ದಲ್ಲಿ ತಕ್ಷಣ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಾಹಿತಿ ನೀಡಿ ಭ್ರಷ್ಟ ಅಧಿಕಾರಿಗಳನ್ನ ಬಯಲಿಗೆ ತನ್ನಿ ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿ.ಎಸ್.ಪಿ ವೇಣುಗೋಪಾಲ್ ಹೇಳಿದರು.
ಅವರು ಕುಂದಗೋಳ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ನಡೆದ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರ ವಿಧಿಸಿದ ವೆಚ್ಚ ಹೊರತು ಪಡಿಸಿ ಸಾರ್ವಜನಿಕರು ಕೆಲಸ ಮಾಡಿಕೊಡಲು ಅಧಿಕಾರಿಗಳು ಹಣ ಪಡೆಯಬಾರದು ಹಾಗೇನಾದರೂ ಹಣ ಪಡೆದಲ್ಲಿ ಅದು ಭ್ರಷ್ಟಾಚಾರ ಈ ತರಹದ ಕೆಲಸಗಳಿಗೆ ಸಾರ್ವಜನಿಕರು ಬ್ರೇಕ್ ಹಾಕಿ ನಮಗೆ ಮಾಹಿತಿ ನೀಡಿ ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್ ಮಾತನಾಡಿ ಸಾರ್ವಜನಿಕರಿಗೆ ಕರ್ತವ್ಯದ ದೃಷ್ಟಿಯಿಂದ ಎಲ್ಲ ಅಧಿಕಾರಿಗಳು ಶಿಸ್ತು ಬದ್ಧವಾಗಿ ಕರ್ತವ್ಯ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಗಿರೀಶ್ ಮನ್ಸೂರು, ಸಮೂಹ ಸಂಘಟನಾಧಿಕಾರಿ ವಿದ್ಯಾ ಪಾಟೀಲ, ಹಾಗೂ ಆರೋಗ್ಯ ನಿರೀಕ್ಷಕಿ ಜಾನಕಿ ಬಳ್ಳಾರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಾಗೀಶ ಗಂಗಾಯಿ, ಉಪಾಧ್ಯಕ್ಷೆ ಭುವನೇಶ್ವರಿ ಕವಲಗೇರಿ ಸರ್ವ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
13/02/2021 04:47 pm