ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿಜ್ಞೆಗೆ ಬದ್ಧರಾಗಿ; ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ

ಧಾರವಾಡ: ಪೊಲೀಸ್ ಪ್ರಶಿಕ್ಷಣಾರ್ಥಿಗಳು ತರಬೇತಿ ನಂತರದ ತಮ್ಮ ಸೇವಾ ಅವಧಿಯಲ್ಲಿ ವೃತ್ತಿಗೆ ಪೂರ್ವದಲ್ಲಿ ಸ್ವೀಕರಿಸಿದ ಪ್ರತಿಜ್ಞೆಗೆ ಬದ್ಧರಾಗಿ ಮತ್ತು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಪೊಲೀಸ್ ಇಲಾಖೆ ತರಬೇತಿ ವಿಭಾಗದ ಪೊಲೀಸ್ ಮಹಾ ನಿರೀಕ್ಷಕ ಪಿ.ಹರಿಶೇಖರನ್ ಹೇಳಿದರು.

ಅವರು ಇಂದು ಬೆಳಿಗ್ಗೆ ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ 6ನೇ ತಂಡದ ಪ್ರಶಿಕ್ಷಣಾರ್ಥಿ ನಾಗರಿಕ ಪೊಲೀಸ್ ಪೇದೆಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅನೇಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರ್ತವ್ಯದಲ್ಲಿದ್ದಾಗ ತಮ್ಮ ಜವಾಬ್ದಾರಿ, ಅಧಿಕಾರಗಳು ಅರ್ಥವಾಗುವುದಿಲ್ಲ. ಹಲವಾರು ರೀತಿಯ ಸವಾಲುಗಳಿದ್ದರೂ ಅಪ್ರಮುಖವಾದವುಗಳಿಗೆ ಪ್ರಾಶಸ್ತ್ಯ ನೀಡುತ್ತಾರೆ. ಇದರಿಂದ ಹಲವಾರು ರೀತಿಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಇಲಾಖೆಯ ಆಶಯ, ಉದ್ದೇಶಗಳಿಗೆ ಆದ್ಯತೆ ನೀಡಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

ಪ್ರಶಿಕ್ಷಣಾರ್ಥಿಗಳು ಉತ್ತಮವಾಗಿ ಪಥಸಂಚಲನ ಪ್ರದರ್ಶಿಸಿದ್ದಕ್ಕೆ ತರಬೇತುದಾರರಿಗೆ ಹರಿಶೇಖರ್ ಅವರು 10 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದರು.

ಕಾರ್ಯಕ್ರಮಕ್ಕೂ ಮೊದಲು ತರಬೇತಿ ಪಡೆದ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ರಾಜ್ಯದ ವಿವಿಧ ಪೊಲೀಸ್ ತರಬೇತಿ ಶಾಲೆಗಳ ಪ್ರಾಂಶುಪಾಲರು, ಅಧಿಕಾರಿಗಳು ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

22/02/2021 12:55 pm

Cinque Terre

25.37 K

Cinque Terre

0

ಸಂಬಂಧಿತ ಸುದ್ದಿ