ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗುಮ್ಮಗೋಳ ಯುವಕರ ಆತ್ಮಹತ್ಯೆ: ಗಂಭೀರವಾಗಿ ಪರಿಗಣಿಸಿದ್ದೇವೆ

ಧಾರವಾಡ: ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಯುವಕರಿಬ್ಬರ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಲಾರಪ್ಪ ಯಲ್ಲಪ್ಪ ತೆಂಬದ ಹಾಗೂ ಪ್ರಕಾಶ ತೆಂಬದ ಎಂಬುವವರು ಇತ್ತೀಚೆಗೆ ಒಂದೇ ದಿನ ಒಂದೇ ಕಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಯುಡಿ ಕೇಸ್ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ.

ಸಾವಿಗೀಡಾದ ಯುವಕರ ಪೋಷಕರು ದೂರು ದಾಖಲಿಸಿದ್ದು, ಆ ದೂರಿನ ಆಧಾರದ ಮೇಲೆ ತನಿಖೆ ಚುರುಕಾಗಿ ನಡೆದಿದೆ. ಪೋಷಕರು ಯಾರ ಮೇಲೂ ಸಂಶಯ ವ್ಯಕ್ತಪಡಿಸಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಏನಾಗಿದೆ ಎಂಬುದು ಗೊತ್ತಾಗುತ್ತದೆ. ಸಾವಿಗೀಡಾದ ಸ್ಥಳದಲ್ಲಿ ಕ್ರಿಮಿನಾಶಕ ಬಾಟಲಿಗಳು ಸಿಕ್ಕಿವೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಏನು ಎಂಬುದು ಗೊತ್ತಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

05/08/2021 06:35 pm

Cinque Terre

41.13 K

Cinque Terre

0

ಸಂಬಂಧಿತ ಸುದ್ದಿ