ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನಮ್ಮನ ಕಿತ್ತೂರಿನಲ್ಲಿ ಅಲರ್ಟ್‌ ಆದ ಪೊಲೀಸರು

ಚನ್ನಮ್ಮನ ಕಿತ್ತೂರು: ಕೊರೊನಾ ಸೋಂಕಿನ ತೀವ್ರತೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಿದೆ.

ಬೆಳಗಾವಿ ಮಹಾರಾಷ್ಟ್ರ ರಾಜ್ಯದ ಗಡಿ ಭಾಗದ ಜಿಲ್ಲೆಯಾಗಿರುವುದರಿಂದ ಈ ಜಿಲ್ಲೆಯಲ್ಲೂ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಅನ್ವಯವಾಗುತ್ತದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಪೊಲೀಸರು ಅಂಗಡಿಕಾರರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ಶನಿವಾರ ರಾತ್ರಿ 9 ಕ್ಕೆ ಅಗತ್ಯ ಸೇವೆಯ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಬಂದ್ ಮಾಡಬೇಕು. ಸೋಮವಾರ ಬೆಳಿಗ್ಗೆ 9 ಗಂಟೆಗೆ ಅಂಗಡಿ ತೆರೆಯಬೇಕು. ವೀಕೆಂಡ್ ಕರ್ಫ್ಯೂ ವೇಳೆ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸರು ಸೂಚನೆ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

06/08/2021 08:17 pm

Cinque Terre

25.39 K

Cinque Terre

0

ಸಂಬಂಧಿತ ಸುದ್ದಿ