ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೆಘಾ ಲೋಕ್ ಅದಾಲತ್ ಯಶಸ್ವಿ

ಧಾರವಾಡ: ಆಗಸ್ಟ್ 14 ರಂದು ಮೆಘಾ ಲೋಕ್ ಅದಾಲತ್‍ನ್ನು ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು. ಈ ಲೋಕ ಅದಾಲತ್‍ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ್ ಎಂ.ಅಡಿಗ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ 12 ಪೀಠಗಳನ್ನು, ಹುಬ್ಬಳ್ಳಿಯಲ್ಲಿ 16 ಪೀಠಗಳನ್ನು, ಕುಂದಗೋಳ, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ 02 ಪೀಠವನ್ನು ಒಟ್ಟು 34 ಪೀಠಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೀತಿಯ ಸುಮಾರು 20,661 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 15001 ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ 185 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಯಿತು. ಸುಮಾರು 26 ಕೋಟಿಗಿಂತ ಹೆಚ್ಚು ಮೊತ್ತವನ್ನು ವಸೂಲು ಮಾಡಲಾಯಿತು.

ಲೋಕ್ ಅದಾಲತ್‍ನಲ್ಲಿ ಧಾರವಾಡ ಜಿಲ್ಲೆಯ ಗೌರವಾನ್ವಿತ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪೆನಿಯ ಅಧಿಕಾರಿಗಳು, ವಿಮೆ ಕಂಪೆನಿಯ ಪ್ಯಾನಲ್ ವಕೀಲರುಗಳು, ಎನ್.ಡಬ್ಲೂ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಅರ್ಜಿದಾರರ ಪರ ವಕೀಲರುಗಳು, ಕಕ್ಷಿದಾರರು ಭಾಗವಹಿಸಿ ಸದರಿ ಮೆಘಾ-ಲೋಕ್ ಅದಾಲತ್‍ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/08/2021 05:11 pm

Cinque Terre

5.74 K

Cinque Terre

0

ಸಂಬಂಧಿತ ಸುದ್ದಿ