ನವಲಗುಂದ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿದ್ದು, ಕೋವಿಡ್ ಹಿನ್ನೆಲೆ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಸಿಪಿಐ ಚಂದ್ರಶೇಖರ ಮಠಪತಿ ವಿನಂತಿಸಿಕೊಂಡರು.
ಹೌದು ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಟಾಪಿಸಬೇಕು. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮಹಾನಗರ ಪಾಲಿಕೆ , ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದಾಗಿದೆ. 20 ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಪಿಐ ಚಂದ್ರಶೇಖರ ಮಠಪತಿ ಅವರು ತಿಳಿಸಿದರು.
Kshetra Samachara
08/09/2021 10:13 pm