ಹುಬ್ಬಳ್ಳಿ: ಅಸ್ಸಾಂ ನಾಗರಿಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಧಾರವಾಡ ಘಟಕ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು.
ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಸದಸ್ಯರು, ಅಸ್ಸಾಂನ ದರಾಂಗ್ ಜಿಲ್ಲೆಯ ಸಿಪಜರ್ ಪ್ರದೇಶದ ನಿವಾಸಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇನ್ನು ಪೊಲೀಸರು ಬಲವಂತವಾಗಿ, ಹಿಂಸಾತ್ಮಕವಾಗಿ ಜನರನ್ನು ಹೊರ ಹಾಕಿರುವುದು ಖಂಡನೀಯ. ಪರಿಣಾಮ ನೂರಾರು ಜನರು ನಿರಾಶ್ರಿತರಾಗಿದ್ದಾರೆ. ಕೂಡಲೇ ಅಸ್ಸಾಂ ಸರ್ಕಾರ ನೈತಿಕ ಹೊಣೆ ಹೊತ್ತು ಸರ್ಕಾರ ನಿರಾಶ್ರಿತರ ಜನರಿಗೆ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Kshetra Samachara
04/10/2021 01:08 pm