ಹುಬ್ಬಳ್ಳಿ: ಮತಾಂತರಕ್ಕೆ ಕಾರಣವಾದ ವ್ಯಕ್ತಿಯನ್ನು ಬಂಧಿಸುವುದಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ನೀಡಿದ ಭರವಸೆ ಮೆರೆಗೆ ಸುಮಾರು ಮೂರು ಗಂಟೆಗಳ ಕಾಲ ಹಾಕಿದ್ದ ಠಾಣೆ ಮುತ್ತಿಗೆಯನ್ನು ಹಿಂದೂ ಪರ ಸಂಘಟನೆಗಳು ಹಿಂದಕ್ಕೆ ಪಡೆದಿವೆ.
ಮತಾಂತರ ಆರೋಪಿಯನ್ನು ಬಂಧಿಸಬೇಕು ಹಾಗೂ ಪ್ರಕರಣ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಡಿಸಿಪಿ ಅವರನ್ನು ಅಮಾನತು ಮಾಡುವಂತೆ ಪಟ್ಟು ಹಿಡಿದು ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕುಳಿತ್ತಿದ್ದರು. ಪ್ರಕರಣ ಗಂಭೀರ ತಿರುವು ಒಡೆಯುತ್ತಿದ್ದಂತೆ ಶಾಸಕ ಅರವಿಂದ್ ಬೆಲ್ಲದ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಈ ಬಗ್ಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಅದರಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಆರೋಪಿಯನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಹಿಂದೂ ಸಂಘಟನೆಗಳು ಪ್ರತಿಭಟನೆ ಹಿಂಪಡೆದಿದ್ದಾರೆ.
Kshetra Samachara
17/10/2021 10:55 pm