ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕೆ.ರಾಮರಾಜನ್ ಅವರಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಪೊಲೀಸ್ ಆಯುಕ್ತ ಲಾಭುರಾಮ್ ಅವರ ನೇತೃತ್ವದಲ್ಲಿ ಬಿಳ್ಕೋಡುಗೆ ಮಾಡಲಾಯಿತು. ಅಲ್ಲದೇ ನೂತನವಾಗಿ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಾಹಿಲ್ ಭಾಗ್ಲಾ ಅವರಿಗೆ ಸ್ವಾಗತಿಸಲಾಯಿತು.
ಇನ್ನೂ ಇದೇ ವೇಳೆ ವರ್ಗಾವಣೆಗೊಂಡ ಕೆ.ರಾಮರಾಜನ್ ಅವರಿಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಶುಭಾಶಯ ತಿಳಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ ಕಾಳಜಿಯೊಂದಿಗೆ ಸೇವೆ ಸಲ್ಲಿಸುವಂತೆ ಅಭಿನಂದನೆ ಸಲ್ಲಿಸಿದರು. ಅಲ್ಲದೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಲಾ ಆ್ಯಂಡ್ ಆರ್ಡರ್ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಾಹಿಲ್ ಭಾಗ್ಲಾ ಅವರಿಗೆ ಸ್ವಾಗತಿಸಿದರು.
ಇದೇ ವೇಳೆ ಪೊಲೀಸ್ ಅಧಿಕಾರಿ ಕೆ.ರಾಮರಾಜನ್ ಅವರು ಕಮೀಷನರೇಟ್ ನಲ್ಲಿ ಸೇವೆ ಸಲ್ಲಿಸಿದ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳುವ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರ ಸಹಕಾರವನ್ನು ಸ್ಮರಿಸಿದರು.
Kshetra Samachara
18/11/2021 09:45 pm