ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಡಿಸಿಪಿ ರಾಮಗೊಂಡ ಬಸರಗಿ ವರ್ಗ

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ರಾಮಗೊಂಡ ಬಸರಗಿ ಅವರನ್ನು ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಮಗೊಂಡ ಬಸರಗಿ ಅವರಿಂದ ತೆರವುಗೊಂಡ ಸ್ಥಳಕ್ಕೆ ಇನ್ನು ಯಾರನ್ನು ನೇಮಕ ಮಾಡಿಲ್ಲ. ಆದರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಯಲ್ಲಿ ಸರಿಯಾಗಿ ಅಧಿಕಾರಿಗಳು ನಿಲ್ಲದ ಬಗ್ಗೆ ಸಾಕಷ್ಟು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿದೆ.

ಇನ್ನು ಇವರ ಜೊತೆಗೆ ರಾಜ್ಯ ಪೊಲೀಸ್ ಇಲಾಖೆಯು ಡಿವೈಎಸ್‍ಪಿ ಮತ್ತು ಡಿಸಿಪಿ ವೃಂದದಲ್ಲಿ ಸೇವೆ ಸಲ್ಲಿಸುತ್ತಿದ್ದ 16 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

08/01/2022 10:15 pm

Cinque Terre

10.39 K

Cinque Terre

0

ಸಂಬಂಧಿತ ಸುದ್ದಿ