ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿಲ್ಲ. ಆದ್ದರಿಂದ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿಲ್ಲ . ವಿದ್ಯಾಗಿರಿ ಪೊಲೀಸ್ ಠಾಣೆಯ ಪಿಐ ಅವರು ನೊಂದ ಕುಟುಂಬದ ದೂರು ಪಡೆಯಲು ಕೂಡ ಅಲೆದಾಡಿಸುತ್ತಿದ್ದಾರೆ. ಆದ್ದರಿಂದ ಇವರ ಮೇಲೆ ಪೊಲೀಸ್ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
Kshetra Samachara
20/01/2022 12:22 pm