ಧಾರವಾಡ: ಧಾರವಾಡ ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷಗಿರಿ ತಿಕ್ಕಾಟ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.
ಕಳೆದ ಜ.22 ರಂದು ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸರ್ವೋದಯ ಟ್ರಸ್ಟ್‌ಗೆ ಯಾವುದೇ ಚೇರ್ಮನ್ ಇಲ್ಲ. ಅದಾಗ್ಯೂ ಅವರು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಚೇರ್ಮನ್ ಗಿರಿ ಮಾಡುತ್ತಿದ್ದಾರೆ. ಅಲ್ಲದೇ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ತುಂಬಲು ಜಾಹೀರಾತು ನೀಡಿದ್ದಾರೆ. ಅವರು ಅಧಿಕೃತವಾಗಿ ಚೇರ್ಮನ್ ಆಗಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಅದರಂತೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಧಾರವಾಡದಲ್ಲಿರುವ ಶಾಲೆಗಳಿಗೆ ಪರಿಶೀಲನೆಗೆಂದು ಭೇಟಿ ನೀಡಿದಾಗ ಮುಗದ ಗ್ರಾಮದಲ್ಲಿ ಬಸವರಾಜ ಹೊರಟ್ಟಿ ಅವರ ಬೆಂಬಲಿಗರು ಮಹಾಸಭಾದ ಸದಸ್ಯರ ಮೇಲೆ ಹಲ್ಲೇ ಮಾಡಿದ್ದಾರೆ. ಅಲ್ಲದೇ ಜಾತಿ ನಿಂದನೆ ಜೊತೆಗೆ ಒಂದು ಕಾರು ಜಖ್ಖಂಗೊಳಿಸಿದ್ದಾರೆಂದು ಆರೋಪಿಸಿ ಮೋಹನ ಗುಡಸಲಮಿ ಎಂಬುವರು ಬಸವರಾಜ ಹೊರಟ್ಟಿ ಸೇರಿದಂತೆ 5 ಜನರ ಮೇಲೆ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.
Kshetra Samachara
27/01/2022 02:27 pm