ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗರಗ ಜಾತ್ರೆಗೆ ಬಿಗಿ ಭದ್ರತೆ

ಧಾರವಾಡ: ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಜಾತ್ರೆ ಎನಿಸಿಕೊಂಡಿರುವ ಗರಗ ಮಡಿವಾಳೇಶ್ವರ ಜಾತ್ರೆ ನಾಳೆ (ಶನಿವಾರ) ನಡೆಯಲಿದ್ದು, ಅದಕ್ಕಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.

ಹತ್ತು ಜನ ಪೊಲೀಸ್ ಅಧಿಕಾರಿಗಳು ಸೇರಿದಂತೆ ದೊಡ್ಡಮಟ್ಟದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗರಗ ಜಾತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿಡಿಯೋಗ್ರಫಿ ಕೂಡ ಮಾಡಲಾಗುತ್ತದೆ. ಗಲಾಟೆ, ದಾಂಧಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿ.ಕೃಷ್ಣಕಾಂತ ಎಚ್ಚರಿಕೆ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/02/2022 07:17 pm

Cinque Terre

29.28 K

Cinque Terre

0

ಸಂಬಂಧಿತ ಸುದ್ದಿ