ಕಲಘಟಗಿ: ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವು ಇಂದು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನೆರವೇರಿತು.
ಈ ಕಾರ್ಯಕ್ರಮವು ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಧಾನ ಹಿರಿಯ ದೀವಾಣಿ ನ್ಯಾಯಾಧೀಶರಾದ ಶೆಟ್ಟರ್ ಮಾತನಾಡಿ, ಬಡತನವು ಮಕ್ಕಳನ್ನು ಕೆಲಸಗಳಿಗೆ ಸಾಗಿಸುತ್ತಿದೆ. ಇಂದಿನ ಮಕ್ಕಳು ನಾಳೆಯ ನಾಗರಿಕರು. ಇವರಿಂದ ಸಮಾಜ ಕಟ್ಟುವ ಕೆಲಸ ಆಗಬೇಕು. ಆದ್ದರಿಂದ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಬಾಲ ಕಾರ್ಮಿಕ ಪದ್ಧತಿಯನ್ನು ನಿವಾರಿಸಬೇಕು ಎಂದರು.
ಕಾರ್ಮಿಕ ಅಧಿಕಾರಿ ಎಂ.ಎಸ್ ಜೋಗುರ ಮಾತನಾಡಿ, ಬಾಲ ಕಾರ್ಮಿಕರ ಪದ್ಧತಿಯನ್ನು ನಿವಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಿಗೆ ಶಾಲೆಯಲ್ಲಿ ಹಾಲು ಊಟ ವಿತರಣೆ ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಿರಿಯ ದಿವಾಣಿ ನ್ಯಾಯಾಧೀಶ ಗಣೇಶ.ಎನ್, ತಾಲೂಕು ದಂಡಾಧಿಕಾರಿ ಎಲ್ಲಪ್ಪ ಗೊಣೆಣ್ಣವರ, ಶಿಕ್ಷಣಾಧಿಕಾರಿ ಪುಟ್ಟಯ್ಯ ಭಜಂತ್ರಿ, ಆರೋಗ್ಯ ಅಧಿಕಾರಿ ಡಾ.ಬಸವರಾಜ ಬಾಸೂರ, ಶಿಶು ಅಭಿವೃದ್ಧಿ ಅಧಿಕಾರಿ ಇದ್ದರು.
Kshetra Samachara
05/03/2022 03:42 pm