ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾರಿ ಚಾಲಕನಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ: 2013ರಲ್ಲಿ ನಡೆದಿದ್ದ ಅಪಘಾತ

ಧಾರವಾಡ: 2013 ರಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಲಾರಿ ಚಾಲಕನಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

2013ರಲ್ಲಿ ಹುಬ್ಬಳ್ಳಿ, ಧಾರವಾಡ ಬೈಪಾಸ್ ಮಧ್ಯೆ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿತ್ತು. ಎದುರಿಗೆ ಬರುತ್ತಿದ್ದ ಬೈಕ್‌ಗೆ ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಬೈಕ್ ಸವಾರ ಕೀರ್ತವಂತ ಕಳ್ಳಿಮನಿ ಸ್ಥಳದಲ್ಲೇ ಸಾವನ್ನಪ್ಪಿದ್ದ.

ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತದ ತನಿಖೆ ನಡೆಸಿದ್ದ ಪೊಲೀಸರು, ಲಾರಿ ಚಾಲಕನ ಮೇಲೆ ಗಂಭೀರ ಆರೋಪ ಕಂಡು ಬಂದ ಕಾರಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ಮಾಡಿದ ನ್ಯಾಯಾಲಯ ಲಾರಿ ಚಾಲಕನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದೂವರೆ ವರ್ಷ ಜೈಲು ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

Edited By : Nirmala Aralikatti
Kshetra Samachara

Kshetra Samachara

08/03/2022 05:51 pm

Cinque Terre

22.15 K

Cinque Terre

12

ಸಂಬಂಧಿತ ಸುದ್ದಿ