ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಸ್ತೆಗೆ ಇಳಿದ ಕ್ಷಿಪ್ರ ಕಾರ್ಯಾಚರಣೆ ಪಡೆ: ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ....!

ಹುಬ್ಬಳ್ಳಿ: ಹಿಜಾಬ್ ಪ್ರಕರಣದ ಕುರಿತು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ವಾಣಿಜ್ಯನಗರಿಯಲ್ಲಿ ಮತ್ತಷ್ಟು ಬಿಗಿಯಾದ ಬಂದೋಬಸ್ತ್ ನಿಯೋಜನೆ ಮಾಡಿದ್ದು, ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ.

ಹೌದು.. ಕೋರ್ಟ್ ಹಿಜಾಬ್ ಪ್ರಕರಣ ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಹಾಕಿದ್ದು, ಈ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ( ಆರ್ ಎ ಎಫ್)ವತಿಯಿಂದ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ.

ಬೆಳ್ಳಂಬೆಳಿಗ್ಗೆಯಿಂದ ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಸಿಬ್ಬಂದಿ ಹುಬ್ಬಳ್ಳಿಯ ಆಯಕಟ್ಟಿನ ಪ್ರದೇಶದಲ್ಲಿ ರೌಂಡ್ಸ್ ಮಾಡಿದ್ದು, ಈಗ ಶಿಕ್ಷಣ ಸಂಸ್ಥೆಗಳ ಹತ್ತಿರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

15/03/2022 11:18 am

Cinque Terre

30.63 K

Cinque Terre

2

ಸಂಬಂಧಿತ ಸುದ್ದಿ