ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯಲಿರುವ ರಂಗಪಂಚಮಿ ಪ್ರಯುಕ್ತವಾಗಿ ಶಾಂತಿ, ಸೌಹಾರ್ದತೆ ಕಾಪಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಹಾಗೂ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಆಯುಕ್ತ ಲಾಭುರಾಮ್ ನಡೆಸಿದರು.
ಹುಬ್ಬಳ್ಳಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಹೋಳಿ ಹಬ್ಬ ಆಚರಿಸಿ ಕಾನೂನು ನಿಯಮ ಮೀರಿ ವರ್ತಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದರು.
ಮಾ.18ರಂದು ಕಾಮಣ್ಣನ ಪ್ರತಿಷ್ಠಾಪನೆ ನಡೆಯಲಿದೆ. ಮಾ.18 ರಾತ್ರಿ ಶಭ್- ಏ-ಭರಾತ್ ನಡೆಯಲಿದ್ದು, ಮಾ.20ರಂದು ಹುಬ್ಬಳ್ಳಿ ಹಲಗೆ ಹಬ್ಬ ಹಾಗೂ ಮಾ.22 ರಂಗಪಂಚಮಿ ಪ್ರಯುಕ್ತ ಹೋಳಿ ನಡೆಯಲಿದ್ದು, ಎಲ್ಲರೂ ಸ್ನೇಹ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಇನ್ನೂ ರಾಜಯೋಗೀಂದ್ರ ಸ್ವಾಮೀಜಿ, ಮುಸ್ಲಿಂ ಧರ್ಮಗುರು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ, ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ ಸೇರಿದಂತೆ ಇತರರು ಭಾಗವಹಿಸಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಮ್ಮ ತಮ್ಮ ಸಂಘಟನೆ ಹಾಗೂ ಸಂಸ್ಥೆಗಳಿಗೆ ಸೂಕ್ತ ಸಲಹೆ ನೀಡುವ ಭರವಸೆ ವ್ಯಕ್ತಪಡಿಸಿದರು.
Kshetra Samachara
17/03/2022 03:17 pm