ಹುಬ್ಬಳ್ಳಿ: ಅವಳಿನಗರದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಯಾವುದೇ ಅಹಿತಕರ ಘಟನೆಗಳು ನಡೆದರೂ ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ಲಾಭುರಾಮ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲದೇ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ಕೂಡ ಮಾಡಿ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಲ್ಲಿಯೇ ಬೇರೆ ಕಡೆಯಿಂದ 15 ಕೆಎಸ್‌ಆರ್‌ಪಿ ತುಕ್ಕಡಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಅಲ್ಲದೇ 4 ಜನ ಡಿವೈಎಸ್‌ಪಿ, 20 ಜನ ಪಿಐ, 70 ಜನ ಪಿಎಸ್ಐ, 500 ಜನ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡದ ಆಯಕಟ್ಟಿನ ಪ್ರದೇಶಗಳಲ್ಲಿ ಮಾತ್ರವಲ್ಲದೆ ಎಲ್ಲ ಕಡೆಯೂ ಸೂಕ್ತ ಬಂದೋಬಸ್ತ್ ಮಾಡುವ ಮೂಲಕ ಹೋಳಿ ಹಬ್ಬದ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
Kshetra Samachara
17/03/2022 10:47 pm