ಅಣ್ಣಿಗೇರಿ: ಹೋಳಿ ಹಬ್ಬದ ಪ್ರಯುಕ್ತ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಟ್ಟಣದ ಗಣ್ಯರ ಸಮ್ಮುಖದಲ್ಲಿ ಶಾಂತಿ ಸಭೆ ಜರುಗಿತು.
ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಲಾಲ್ ಸಾಬ್ ಜೂಲಕಟ್ಟಿ ಅವರು ಮಾತನಾಡಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು.ಯಾವುದೇ ತರಹದ ಅಹಿತಕರ ಘಟನೆಗಳು ನಡೆದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ತಾಲೂಕು ದಂಡಾಧಿಕಾರಿ ಮಂಜುನಾಥ ಅಮಾಸೆ ಅವರು ಮಾತನಾಡಿ ಪ್ರತಿಯೊಬ್ಬರ ನೈಸರ್ಗಿಕ ಬಣ್ಣಗಳನ್ನು ಬಳಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿ ಮತ್ತು ಯಾವುದೇ ತರಹದ ಗೊಂದಲಗಳಿಗೆ ಹೋಗದಿರಿ ಎಂದು ಮಾತನಾಡಿದರು.
ಇದೇ ವೇಳೆ ಸಿಪಿಐ ಮಠಪತಿ ಅವರು ಮಾತನಾಡಿ ಈ ಹಬ್ಬ ಹಿಂದೂ-ಮುಸ್ಲಿಂ ಭಾವೈಕ್ಯದ ಹಬ್ಬ ವಾಗಿರುತ್ತದೆ ಯಾವುದೇ ಗೊಂದಲಗಳಿಲ್ಲದೆ ಅಹಿತಕರ ಘಟನೆಗೆ ಅವಕಾಶ ಕೊಡದೆ ಸಂಭ್ರಮದಿಂದ ಹಬ್ಬವನ್ನು ಆಚರಿಸೋಣ ಎಂದು ಹೇಳಿದರು.
ಈ ವೇಳೆ ಪಟ್ಟಣದ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
17/03/2022 11:49 pm