ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ: ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

ಹುಬ್ಬಳ್ಳಿ: ಇಲ್ಲಿನ ಅಮರಗೋಳದ ಬಾಲಾಜಿ ನಗರದ ಬಸವೇಶ್ವರ ಎಂಟರ್ಪ್ರೈಸ್ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಎಪಿಎಂಸಿ ನವನಗರ ಠಾಣೆ ಪೊಲೀಸರ ಜತೆಗೂಡಿ ದಾಳಿ ನಡೆಸಿದ್ದಾರೆ.

ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3,33,800 ಮೌಲ್ಯದ 151.73 ಕ್ವಿಂಟಾಲ್ ಪಡಿತರ ಅಕ್ಕಿ, ಓಮಿನಿ, ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಮಾಹಿತಿ ಕಲೆ ಹಾಕಿದ ಆಹಾರ ಇಲಾಖೆಯ ಅಧಿಕಾರಿಗಳು ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದವರಿಗೆ ಬಿಸಿ ಮುಟ್ಟಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

19/03/2022 10:35 am

Cinque Terre

24.1 K

Cinque Terre

0

ಸಂಬಂಧಿತ ಸುದ್ದಿ