ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವ್ಯಾಜ್ಯ ಪರಿಹಾರದಲ್ಲಿ ಮಧ್ಯಸ್ಥಿಕೆ ತಂತ್ರ ಪರಿಣಾಮಕಾರಿ ಆಯುಧ: ನ್ಯಾಯಮೂರ್ತಿ ಎಸ್.ಸುಜಾತಾ

ಧಾರವಾಡ: ನ್ಯಾಯದಾನದ ವಿವಿಧ ಕ್ರಮಗಳಲ್ಲಿ ಮಧ್ಯಸ್ಥಿಕೆ ತಂತ್ರವು ಅತ್ಯಂತ ಪರಿಣಾಮಕಾರಿ ತಂತ್ರವಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಂಡು ವ್ಯಾಜ್ಯ ಪರಿಹಾರ ಮಾಡಲು ಸಹಕರಿಸುವ ಮಧ್ಯಸ್ಥಿಕೆಗಾರರ ಪಾತ್ರ ಬಹುಮುಖ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಎಸ್.ಸುಜಾತಾ ಹೇಳಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ ಮತ್ತು ಗದಗ ವಕೀಲರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗದಗ ಜಿಲ್ಲೆಗಳ ಮಧ್ಯಸ್ಥಿಕೆಗಾರರಿಗೆ ಆಯೋಜಿಸಿರುವ ಎರಡು ದಿನಗಳ ಮಧ್ಯಸ್ಥಿಕೆ ಪುನರ್‌ ಮನನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಾಜ್ಯಗಳಲ್ಲಿ ಮಧ್ಯಸ್ಥಿಕೆ ಮೂಲಕ ಪರಿಹಾರ ಎನ್ನುವುದು ಮೊದಲಿನಿಂದಲೂ ನಡೆದು ಬಂದಿದೆ. ಈಗ ಇದು ಕಾನೂನು ಸ್ವರೂಪ ಪಡೆಯುತ್ತಿದೆ. ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಮಧ್ಯಸ್ಥಿಕೆಗೆ ಅರ್ಹವಿರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ನ್ಯಾಯಾಧೀಶರು ಶಿಫಾರಸ್ಸು ಮಾಡಬೇಕು. ಇದರಿಂದ ನ್ಯಾಯಾಲಯದ ಕೆಲಸದ ಒತ್ತಡ, ಕಕ್ಷಿದಾರರ ಸಮಯ, ಹಣದ ಉಳಿತಾಯದೊಂದಿಗೆ ಅವರಲ್ಲಿ ನ್ಯಾಯದಾನದ ಬಗ್ಗೆ ಮತ್ತಷ್ಟು ವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದರು.

ಕರ್ನಾಟಕ ಹೈಕೋರ್ಟ್ ಇನ್ನೋರ್ವ ನ್ಯಾಯಮೂರ್ತಿ ರವಿ ಹೊಸಮನಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

21/03/2022 06:24 pm

Cinque Terre

35.06 K

Cinque Terre

0

ಸಂಬಂಧಿತ ಸುದ್ದಿ