ಧಾರವಾಡ: ಧಾರವಾಡದ ಸೂಪರ್ ಮಾರುಕಟ್ಟೆಯಲ್ಲಿ ಜೆಸಿಬಿಗಳು ಮತ್ತೆ ಸದ್ದು ಮಾಡಿವೆ.
ಹೌದು! ಮಹಾನಗರ ಪಾಲಿಕೆ ಜಾಗ ಅತಿಕ್ರಮಿಸಿ ಅಂಗಡಿ ಹಾಕಿಕೊಂಡವರಿಗೆ ಪಾಲಿಕೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ ಮಧ್ಯೆ ಜೆಸಿಬಿಯಿಂದ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು. ಆದರೆ, ಇದಕ್ಕೆ ಅಂಗಡಿಕಾರರು ವಿರೋಧ ವ್ಯಕ್ತಪಡಿಸಿದ ಪ್ರಸಂಗವೂ ಜರುಗಿತು.
ಅಂಗಡಿಕಾರರಿಗೆ ತಮ್ಮ ಅಂಗಡಿಗಳನ್ನು ತೆರವುಗೊಳಿಸಿಕೊಳ್ಳಿ ಎಂದು ನೋಟಿಸ್ ನೀಡಿದ್ದರೂ ತೆರವುಗೊಳಿಸಿಕೊಂಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಪಾಲಿಕೆ ವತಿಯಿಂದಲೇ ತೆರವುಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು. ಇದರಿಂದ ಕೆಲ ಹೊತ್ತು ಅಂಗಡಿಕಾರರು ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು.
ನಂತರ ಅಂಗಡಿಕಾರರು ಸ್ವತಃ ತಾವೇ ತಮ್ಮ ಅಂಗಡಿಗಳನ್ನು ತೆರವುಗೊಳಿಸಿಕೊಳ್ಳಲು ಒಪ್ಪಿ ಅಂಗಡಿಗಳನ್ನು ತೆಗೆದುಕೊಳ್ಳಲು ಮುಂದಾದರು.
Kshetra Samachara
23/03/2022 10:39 am