ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಏಪ್ರಿಲ್ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಸೆಕ್ಷನ್ 144 ಜಾರಿ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಾಜ್ಞೆ ಏ.23ರ ವರೆಗೆ ಮುಂದುವರಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಏ.17ರ ರಾತ್ರಿ ನಡೆದಿದ್ದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ‌ ಏ‌.20ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸದ್ಯ ನಿಷೇಧಾಜ್ಞೆಯ ಅವಧಿ ವಿಸ್ತರಿಸಿದ ಆದೇಶ ಹೊರಡಿಸಿದ್ದು, ಏ. 23ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ಇನ್ನೂ ಹಳೇ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು,ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಅವರು ಆದೇಶ ಹೊರಡಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

20/04/2022 11:22 am

Cinque Terre

21.35 K

Cinque Terre

1

ಸಂಬಂಧಿತ ಸುದ್ದಿ