ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಅಗ್ನಿಶಾಮಕ ಸೇವಾ ಸಪ್ತಾಹ, ಅಧಿಕಾರಿಗಳಿಂದ ಜಾಗೃತಿ

ಕುಂದಗೋಳ : ಪಟ್ಟಣದ ಅಗ್ನಿಶಾಮಕ ದಳದ ಠಾಣಾಧಿಕಾರಿ ಗೋವಿಂದಪ್ಪ ಟಿ. ಯವರ ನೇತೃತ್ವದಲ್ಲಿ ಅಗ್ನಿಶಾಮಕ ದಳದ ಸರ್ವ ಅಧಿಕಾರಿ ಸಿಬ್ಬಂದಿಗಳು ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮ ಕೈಗೊಂಡರು.

ಅಗ್ನಿಶಾಮಕ ಸೇವಾ ಸಪ್ತಾಹ ಅಂಗವಾಗಿ ಕುಂದಗೋಳ ಗ್ರಾಮೀಣ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕರಿಗೆ ಆಕಸ್ಮಿಕ ಅಗ್ನಿ ಅವಘಡವಾದಾಗ ಯಾವ ರೀತಿ ಎಚ್ಚರಿಕೆ ವಹಿಸಬೇಕು ಎಂಬುದನ್ನು ತಿಳಿಸಿದರು.

ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಕುಂದಗೋಳ ಪಟ್ಟಣ ಮೂರಂಗಡಿ ಕ್ರಾಸ್, ಮಾರ್ಕೇಟ್ ರಸ್ತೆ, ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ, ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ವೃತ್ತದಲ್ಲಿ ಜಾಗೃತಿ ಮೂಡಿಸಿದರು.

Edited By :
Kshetra Samachara

Kshetra Samachara

21/04/2022 10:56 pm

Cinque Terre

33.02 K

Cinque Terre

0

ಸಂಬಂಧಿತ ಸುದ್ದಿ