ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೀಠ, ನಾಲ್ಕು ವಾರಗಳ ಕಾಲ ಮುಂದೂಡಿದೆ.
ಮಹಾನಗರ ಪಾಲಿಕೆಗೆ ಚುನಾವಣೆ ನಡೆದು ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಚುನಾವಣೆಯನ್ನು ಸರ್ಕಾರ ನಡೆಸುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕಾಂಗ್ರೆಸ್‌ನ ಪಾಲಿಕೆ ಸದಸ್ಯ ಶಂಭುಗೌಡ ಸಾಲಮನಿ ಸೇರಿದಂತೆ ಇತರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಇದೆ ಎಂದು ಅಭಿಪ್ರಾಯಪಟ್ಟು, ನಾಲ್ಕುವಾರ ವಿಚಾರಣೆ ಮುಂದೂಡಿದೆ.
Kshetra Samachara
23/04/2022 01:31 pm