ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ನ ಕೇಶ್ವಾಪೂರ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಇಂದು ಬೆಳಿಗ್ಗೆ ಆಗಮಿಸಿದ ಎಡಿಜಿಪಿಯವರಿಗೆ ಅದ್ಧೂರಿಯಾಗಿ ಸ್ವಾಗತಿಸಿದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ವಿಶೇಷ ಗೌರವದ ಮೂಲಕ ಸ್ವಾಗತಿಸಿದರು.ಇನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಲಾ ಆ್ಯಂಡ್ ಆರ್ಡರ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುವ ಹಾಗೂ ಕಾರ್ಯವೈಖರಿ ವೀಕ್ಷಣೆ ಮಾಡುವ ಸದುದ್ದೇಶದಿಂದ ಭೇಟಿ ನೀಡಿದರು.
Kshetra Samachara
03/06/2022 11:35 am