ಹುಬ್ಬಳ್ಳಿ: ನಗರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗೆ ಅಂಕುಶ ಹಾಕಲು ಪೊಲೀಸರು ತಯಾರಿ ನಡೆಸಿದ್ದಾರೆ. ಇತ್ತೀಚಿಗೆ ಸರ್ಕಾರ ನಿಗದಿ ಪಡಿಸಿದ ಸಮಯ ಮೀರಿದರೂ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸಮಯಕ್ಕೆ ಸರಿಯಾಗಿ ಬಾರ್ ಬಂದ್ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡಿದ್ದು, ಗೋಕುಲ ರೋಡ್ ಇನ್ಸ್‌ಪೆಕ್ಟರ್ ಕಾಲಿಮಿರ್ಚಿ ತಮ್ಮ ವ್ಯಾಪ್ತಿಯ ಬಾರ್ ಮಾಲೀಕರನ್ನ ಕರೆಸಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಗೋಕುಲ ರೋಡ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಕೆಲ ಬಾರ್ ಪಬ್ ಮಾಲೀಕರು ವಿಪರೀತ ಸೌಂಡ್ ಹಾಕಿ ಮದುವೆ ಸಮಾರಂಭ ಮಾಡುತ್ತಿದ್ದಾರೆ. ಅಲ್ಲದೇ ಒಂದು ಪಬ್ ಅಧಿಕ ಮ್ಯೂಸಿಕ್ ಬಳಸಿ ವ್ಯಾಪಾರ ನಡೆಸುತ್ತಿದ್ದು ಇದಕ್ಕೆ ಕಡಿವಾಣ ಹಾಕಿಕೊಳ್ಳುವಂತೆ ಇನ್ಸ್‌ಪೆಕ್ಟರ್ ಕಾಲಿಮಿರ್ಚಿ ಅವರು ವಾರ್ನಿಂಗ್ ಮಾಡಿದ್ದಾರೆ. ಸ್ಥಳೀಯ ನಿವಾಸಿ ಒಬ್ಬರು ಫೇಸ್ ಬುಕ್ ಮೂಲಕ ದೂರು ನೀಡಿರುವ ಹಿನ್ನೆಲೆ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ.
ಬಾರ್‌ಗಳನ್ನ ಸಮಯಕ್ಕೆ ಸರಿಯಾಗಿ ಬಂದ್ ಮಾಡಬೇಕು. ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಪಾರ್ಕಿಂಗ್ ಸಮಸ್ಯೆ ಉಂಟಾಗಬಾರದು. ತಂಟೆ ತಕರಾರು ಬಂದಲ್ಲಿ 112 ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು ಉಲ್ಲಂಘನೆ ಮಾಡಿದ್ದಲ್ಲಿ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತ ಪರವಾನಿಗೆ ಪಡೆಯಬೇಕು ಎಂದು ತಿಳಿಸಿದ್ದಾರೆ.
Kshetra Samachara
05/06/2022 07:40 pm