ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ವಾಣಿಜ್ಯನಗರಿಯಲ್ಲಿ ಹೈಅಲರ್ಟ್

ಹುಬ್ಬಳ್ಳಿ: ಮೊಹಮ್ಮದ್ ಪೈಗಂಬರ್ ವಿರುದ್ಧ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಹು-ಧಾ ಪೊಲೀಸ್ ಕಮೀಷನರೇಟ್ ನಿಂದ ಬಂದೋಬಸ್ತ್ ಕೈಗೊಂಡಿದ್ದಾರೆ.

ಹೌದು.. ನಗರದ ಪ್ರಮುಖ ಆಯಕಟ್ಟಿನ ಸ್ಥಳಗಳಾದ ಮಸೀದಿ, ದೇವಸ್ಥಾನ ಮತ್ತಿತರ ಸ್ಥಳಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ನಿರ್ದೇಶನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತ, ಹಳೇ ಹುಬ್ಬಳ್ಳಿ, ಗಣೇಶ ಪೇಟೆ ಸೇರಿ ಹಲವೆಡೆ ಪೊಲೀಸ್ ಪರೇಡ್ ನಡೆಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಭಟನೆಗೆ ಅವಕಾಶ ನೀಡದಿರುವಂತೆ ಪೊಲೀಸ್ ಆಯುಕ್ತರ ಸೂಚನೆ ನೀಡಿದ್ದು, ನಗರದ ವಿವಿಧೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಸದಂತೆ ಮುಂಜಾಗ್ರತೆ ವಹಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

11/06/2022 01:28 pm

Cinque Terre

25.97 K

Cinque Terre

8

ಸಂಬಂಧಿತ ಸುದ್ದಿ