ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ನಡೆದ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಇನ್ಸ್‌ಪೆಕ್ಟರ್ ಹಲ್ಲೆ ಆರೋಪ ಪ್ರಕರಣವನ್ನು ಹತೋಟಿಗೆ ತರಲು ಹು-ಧಾ ಪೊಲೀಸ್ ಆಯುಕ್ತರು ನಿರ್ಧಾರವನ್ನು ಕೈಗೊಂಡಿದ್ದು, ವಿದ್ಯಾನಗರ ಇನ್ಸ್‌ಪೆಕ್ಟರ್ ಮಹಾಂತೇಶ ಹೋಳಿ ಅವರನ್ನು ಸಿಸಿಬಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕಿಮ್ಸ್ ಆವರಣದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ ವಿಚಾರವಾಗಿ ನಡೆದಿದ್ದ ಗಲಾಟೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಹಾಂತೇಶ ಹೋಳಿ ಹಾಗೂ ಹಿಂದೂ ಕಾರ್ಯಕರ್ತ ಮಲ್ಲಿಕಾರ್ಜುನ ಸತ್ತಿಗೇರೆ ನಡುವೆ ವಾಗ್ವಾದ ನಡೆದಿತ್ತು. ಈ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಸತ್ತಿಗೇರಿ ಮೇಲೆ ಇನ್ಸ್‌ಪೆಕ್ಟರ್ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಆರೋಪ ಕೇಳಿ ಬಂದ ಬೆನ್ನಲ್ಲೇ ಪಿಐ ಮಹಾಂತೇಶ ಹೋಳಿ ಅವರನ್ನು ಹುಬ್ಬಳ್ಳಿಯ ಸಿಸಿಬಿಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತ ಲಾಭುರಾಮ್ ಆದೇಶ ಹೊರಡಿಸಿದ್ದಾರೆ.
Kshetra Samachara
15/06/2022 05:15 pm