ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ ಯೋಜನೆ ಹಿನ್ನೆಲೆ ದೇಶಾದ್ಯಂತ ಗಲಾಟೆ ಹಾಗೂ ಯುವ ಸಮುದಾಯದಿಂದ ನಡೆಸಲಾಗುತ್ತಿರುವ ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಿಂದ ವಾಹನಗಳ ತಪಾಸಣೆ ನಡೆಸಲಾಯಿತು.
ಹೌದು. ಇತ್ತೀಚೆಗೆ ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವಾರು ಕಡೆ ಯುವಕರು ಪ್ರತಿಭಟನೆ ಮಾಡಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡಿರುವ ಘಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ರಾತ್ರೋರಾತ್ರಿ ರಸ್ತೆಗೆ ಇಳಿದ ಪೊಲೀಸರು ಚೆನ್ನಮ್ಮ ವೃತ್ತ, ಕೇಶ್ವಾಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ವಾಹನಗಳ ತಪಾಸಣೆ ನಡೆಸಿ ಸೂಕ್ತ ಸೂಚನೆ ನೀಡುತ್ತಿದ್ದಾರೆ.
ಇನ್ನು ಧಾರವಾಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವಾರು ಯುವಕರು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡದೇ ಅಲ್ಲಲ್ಲಿ ಗಲಾಟೆ ಮಾಡಲು ಗುಂಪು ಸೇರುತ್ತಿದ್ದು, ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಬರುತ್ತಿದೆ. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಪ್ರಕರಣಗಳನ್ನು ದಾಖಲಿಸುವಂತಹ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತಹ ಅವಕಾಶವನ್ನು ಪೊಲೀಸ್‌ರಿಗೆ ನೀಡದೇ, ಯಾವುದೇ ಕಾರಣಕ್ಕೂ ಯಾರೇ ಆಗಿರಲಿ ಕಾನೂನನ್ನು ಕೈಗೆತ್ತಿಕೊಳ್ಳದೆ, ಗಲಾಟೆ ಮಾಡುವುದಾಗಲಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಹಿಸಬಾರದು ಅಂತಾ ಈ ಮೂಲಕ ಯುವಕರ ಹಾಗೂ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.
ಒಟ್ಟಿನಲ್ಲಿ ಸರ್ಕಾರದ ನಿರ್ಧಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಪೊಲೀಸ್ ಕಮೀಷನರೇಟ್ ನಿಂದ ಕೂಡ ಸೂಕ್ತ ಕಾರ್ಯಾಚರಣೆ ಮಾಡುವ ಮೂಲಕ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
Kshetra Samachara
19/06/2022 10:45 pm